Breaking:

ದೇವಾಲಯದಲ್ಲಿ ಜಾರಿ ಬಿದ್ದ ಎಚ್ ಡಿ ರೇವಣ್ಣ

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ದೇವಾಲಯದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಸದ್ಯ ಅವರು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಚ್.ಡಿ.ರೇವಣ್ಣ ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಕಾಲು ಜಾರಿ ಬಿದ್ದರು.

ಏಕಾದಶಿ ಪ್ರಯುಕ್ತ ಉಪವಾಸವಿದ್ದ ರೇವಣ್ಣ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದಿದ್ದಾರೆ.

ಎಚ್. ಡಿ. ರೇವಣ್ಣ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಅವರು ಕಾಲು ಜಾರಿ ಬಿದ್ದಿದ್ದು, ಪಕ್ಕೆಲುಬಿಗೆ ತೀವ್ರವಾದ ನೋವಾಗಿದೆ.

ತಕ್ಷಣ ಅವರನ್ನು ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುಗೆ ದಾಖಲು ಮಾಡಲಾಗಿದೆ.

Share this article

ಟಾಪ್ ನ್ಯೂಸ್