Breaking:

ವಿದ್ಯುತ್ ತಂತಿ ತಗುಲಿ ಯುವ ರೈತ ಮೃತ್ಯು

ಕಲಬುರಗಿ : ಜಮೀನಿನಲ್ಲಿ‌‌ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟಿರುವ ಘಟನೆ ಕಲಬುರಗಿಯ ಹಡಗಿಲ್ ಹಾರುತಿ ಗ್ರಾಮದಲ್ಲಿ ನಡೆದಿದೆ.

ಮೃತ ರೈತನನ್ನು ಖಾಜಪ್ಪ ಭಜಂತ್ರಿ ಎಂದು ಗುರುತಿಸಲಾಗಿದೆ.

ಪರಿಚಯಸ್ಥರ ಜಮೀನಿನಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ಬಳಿಕ ಆಸ್ಪತ್ರೆ ಕರೆದೊಯ್ಯುವ ಮಾರ್ಗಮದ್ಯೆ ಖಾಜಪ್ಪ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್