ಮಂಗಳೂರು: ವಿಧಾನಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಐವನ್ ಡಿಸೋಜಾ ಅವರ ವೆಲೆನ್ಸಿಯಾದಲ್ಲಿದ್ದ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟದಿಂದ ಅವರ ಮನೆಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.