ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳು.
ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ಆರೋಪಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು.