ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ನಡೆದಿದೆ.
ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳಾದ ಸಂಗೀತಾ(33) ಮತ್ತು ಮಕ್ಕಳಾದ ಪ್ರೀತಿ(13), ಪ್ರಜ್ವಲ್(9) ಆತ್ಮಹತ್ಯೆಗೆ ಯತ್ನಿಸಿದವರು.
ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಮಕ್ಕಳನ್ನ ರಕ್ಷಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.