ಬೆಂಗಳೂರು: ವಾರೆಂಟ್ ಜಾರಿಯಾದ್ರೂ ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ವಕೀಲ ಕೆ.ಎನ್. ಜಗದೀಶ್ ಕುಮಾರ್ ರನ್ನು ಅರೆಸ್ಟ್ ಮಾಡಲಾಗಿದೆ.
ಕೊಡಿಗೇಹಳ್ಳಿ ಪೊಲೀಸರಿಂದ ಗೋವಾದಲ್ಲಿ ಜಗದೀಶ್ ಅವರನ್ನು ಬಂಧಿಸಿದ್ದಾರೆ.
ಜಗದೀಶ್ ಅವರನ್ನು ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಪೊಲೀಸರು ಕರೆ ತಂದಿದ್ದಾರೆ. 2022ರಲ್ಲಿ ಇವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ
ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇದೀಗ ಪೊಲೀಸರು ವಕೀಲ ಜಗದೀಶ್ ಕುಮಾರ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.