Breaking:

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿರುವ ಕಮಲಾ ಹ್ಯಾರಿಸ್ ಹಿನ್ನೆಲೆಯೇನು ಗೊತ್ತಾ?

ವಿಶ್ವದ ದೊಡ್ಡಣ್ಣ ಎಂದು ಕರೆಯಲ್ಪಡುವ ಅಮೆರಿಕ ದೇಶದ ಅಧ್ಯಕ್ಷೀಯ ಚುನಾವಣೆ ನವೆಂಬರ್ ನಲ್ಲಿ ನಡೆಯಲಿದೆ.  ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌  ಅವರು ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದರೆ, ಅಮೆರಿಕಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಲಿದ್ದಾರೆ. ಕಪ್ಪುವರ್ಣಿಯ ಕಮಲಾ ಹ್ಯಾರಿಸ್ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮೊದಲ ಏಷ್ಯಾ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಕಮಲಾ ಹ್ಯಾರಿಸ್​ ಮೂಲತಃ ಭಾರತದವರು. ಅವರ ತಾಯಿ ಹುಟ್ಟಿದ್ದು ತಮಿಳುನಾಡಿನ ಚೆನ್ನೈನಲ್ಲಿ. ಬಳಿಕ ಯುಎಸ್​ಗೆ ತೆರಳಿ, ಅಲ್ಲಿನವರನ್ನೇ ಮದುವೆಯಾಗಿ ನೆಲೆಸಿದ್ದರು.

ಯುಎಸ್​ ಉಪಾಧ್ಯಕ್ಷೆ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೂ ಕಮಲಾ ಹ್ಯಾರಿಸ್​ ಪಾತ್ರರಾಗಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಸ್ಥಾನದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾದೇವಿ ಹ್ಯಾರಿಸ್ ಅವರ ತಂದೆ ಜಮೈಕಾ ಮೂಲದವರಾದರೆ ತಾಯಿ ಭಾರತೀಯ ಮೂಲದವರು. ಉನ್ನತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಕಮಲಾ, ಪೊಲೀಸ್ ವ್ಯವಸ್ಥೆಯಲ್ಲಿ ಗಮನಾರ್ಹ ಸುಧಾರಣೆ ತಂದು, ಬಳಿಕ ರಾಜಕೀಯ ಪ್ರವೇಶಿಸಿದ್ದರು.

 

 

Share this article

ಟಾಪ್ ನ್ಯೂಸ್