ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ದುರಂತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ ಸ್ಥಳದಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ.
ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದ್ದು, ಮೃತರನ್ನು ಉಳುವರೆ ಗ್ರಾಮದ ಸಣ್ಣಿ ಹನುಮತಗೌಡ (61) ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿರುವ ಸಿಬ್ಬಂದಿಗಳು ಉಳಿದ ಮೂವರ ಮೃತದೇಹದ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
ಈವರೆಗೆ ದುರ್ಘಟನೆಯಲ್ಲಿ 8 ಮಂದಿಯ ಮೃತದೇಹ ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.