ಭೂ ಕುಸಿತ ಸಂಭವಿಸಿದ ವಯನಾಡಿನಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರು ಭರವಸೆ ನೀಡಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು, ರಾಜಕಾರಣಿಗಳು ಸೇರಿ ಹಲವು ಮಂದಿ ಕೋಟ್ಯಾಂತರ ರೂ.ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಮಧ್ಯೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೂಡ 100 ಮನೆ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ.
ನಿನ್ನೆ ರಾಹುಲ್ ಗಾಂಧಿ ವಯನಾಡಿನಲ್ಲಿ 100 ಮನೆಗಳನ್ನು ಕಾಂಗ್ರೆಸ್ ವತಿಯಿಂದ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದರು. ಜಮೀನು, ಧನ ಸಹಾಯ ಸೇರಿ ನೂರಾರು ಮಂದಿ ಸಂತ್ರಸ್ತರಿಗೆ ನೆರವಿಗೆ ಮುಂದಾಗಿದ್ದಾರೆ. ಅದರಂತೆ ಇಂಡಿಯನ್ ಗ್ರಾಂಡ್ ಮುಪ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೂಡ ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ.