Breaking:

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.

ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಪುತ್ತಿಲ ಭಾರಿ ಸದ್ದು ಮಾಡಿದ್ದರು. ಆದರೆ, ಈಗ ಬಿಜೆಪಿ ನಾಯಕಿಯೊಬ್ಬರ ಬಳಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ.

ನೀವು ಬಿಜೆಪಿಗೆ ಸೇರಿದ್ದು ನಾಚಿಕೆ ಆಗಲಿಲ್ವ ಎಂದು ಮಹಿಳೆ ಕೇಳಿದ್ದಾಳೆ. ಆದರೆ, ಇದಕ್ಕೆ ಉತ್ತರಿಸಿದ ಅರುಣ್ ಪುತ್ತಿಲ ಅವರದ್ದೆನ್ನಲಾದ ಧ್ವನಿ ಹೋಲುವ ವ್ಯಕ್ತಿ ‘ರಾಜಕೀಯದಲ್ಲಿ ನಾಚಿಗೆ, ಹೇಸಿಗೆ ಥೂ ಅದೆಲ್ಲಾ ಇಲ್ಲ’ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ ಅವರ ಧ್ವನಿ ಹೋಲುವ ವ್ಯಕ್ತಿ, ನಾಚಿಕೆ, ಹೇಸಿಗೆಯನ್ನೆಲ್ಲಾ ಬಿಟ್ಟವರೇ ಪೊಲಿಟೀಶಿಯನ್ ಎನಿಸಿಕೊಳ್ಳುತ್ತಾರೆ. ಮಾನ ಮರ್ಯಾದೆ ಎರಡು ಬಿಡದಿದ್ದರೇ ಉನ್ನತ ಹುದ್ದೆಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮಹಿಳೆ ಆಡಿಯೋದಲ್ಲಿ ‘ಸೌಶಯಾತ್ಮಾವೀ ಇನಶ್ಯತೀ’ ಎಂಬ ಸಂಸ್ಕೃತ ಶ್ಲೋಕ ಹೇಳಿದ್ದಾಳೆ. ಅಂದರೆ, ಸಂಶಯ ಪಟ್ಟವನು ನಾಶವಾಗುತ್ತಾನೆ. ನೀವು ನಾಶ ಆದ್ರಿ ಎಂದು ಮಹಿಳೆ ಮಾತನಾಡಿದ್ದಾಳೆ.

ಆಡಿಯೋದಲ್ಲಿ ಹಣದ ಬಗ್ಗೆ ಮಾತುಕತೆ ಇದೆ. ಇನ್ನು ಬಿಜೆಪಿ ನಾಯಕಿ ನೀವು ಬೆಂಗಳೂರಿನಲ್ಲಿ ಒಂಟಿಯಾಗಿ ಸಿಕ್ಕಾಗ ಹೆಚ್ಚಿನ ವಿಚಾರವನ್ನು ಮಾತನಾಡುವುದಾಗಿ ಹೇಳಿದ್ದಾರೆ. ಈಗ ಆಡಿಯೋ ರೆಕಾರ್ಡ್ ಮಾಡಿ ನಿಮಗೆ ಇವತ್ತು ಕಡ್ಡಿ ಇಟ್ಟಿದ್ದೇನೆ ಎಂದು ಮಹಿಳೆ ಹೇಳುವುದು ಆಡಿಯೋದಲ್ಲಿ ಸೆರೆಯಾಗಿದೆ.

ಈ ಆಡಿಯೋ ಅರುಣ್ ಕುಮಾರ್ ಪುತ್ತಿಲ ಅವರದ್ದು ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಆಡಿಯೋ ಅವರದ್ದೇಯಾ ಅಥವಾ ಇನ್ಯಾರದ್ದೋ ಎಂಬುವುದು ಹೆಚ್ಚಿನ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.



Share this article

ಟಾಪ್ ನ್ಯೂಸ್