Breaking:

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ

ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶನಿವಾರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ ಎಂದು ಅಸ್ಸಾಂ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಗಾಂವ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾದ ತಫಾಜುಲ್ ಇಸ್ಲಾಂನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದರು. ಬಳಿಕ ಶನಿವಾರ ಜಾವ 4 ಗಂಟೆಗೆ ಅಪರಾಧ ಎಸಗಿದ ಸ್ಥಳಕ್ಕೆ ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಅಲ್ಲೇ ಇದ್ದ ಕೆರೆಗೆ ಹಾರಿದ್ದಾನೆ.

ಸರಿಯಾಗಿ ಈಜು ಬಾರದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮಳುಗಿ ಆತ ಮೃತಪಟ್ಟಿದ್ದು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಅಷ್ಟೋತ್ತಿಗಾಗಲೇ ಆತ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 22ರಂದು ಸಂಜೆ ಟ್ಯೂಷನ್ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಬೈಕಿನಲ್ಲಿ ಬಂದ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು.

Share this article

ಟಾಪ್ ನ್ಯೂಸ್