ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವಣ್ಣ ಅವರ ಹತ್ಯೆಗೆ ಹಂತಕರು ಜೈಲಿನಿಂದಲೇ ಸಂಚು ರೂಪಿಸಿರುವುದು ಬಯಲಾಗಿದೆ.
ಬಸವಣ್ಣ ಹತ್ಯೆಗೆ ಹಂತಕರು ಜೈಲಿನಿಂದಲೇ ಸಂಚು ರೂಪಿಸಿದ್ದರು ಎಂಬ ಬಗ್ಗೆ ಪೊಲೀಸರ ಎಫ್‌ಐಆರ್ ನಲ್ಲಿ ದಾಖಲಾಗಿದೆ.
ಶಾಸಕರ ಆಪ್ತರೊಬ್ಬರು ನೀಡಿರುವ ದೂರಿನ ಮೇರೆಗೆ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಟ್ ಪಟ್ ನಗರದ ನಿವಾಸಿ ಮುಬಾರಕ್ ಮುಬ್ಬು ಎಂಬಾತ ಕಳೆದ 17ನೇ ತಾರಿಕಿನಂದು ವ್ಯಕ್ತಿಯೋರ್ವನ ಬಳಿ ಬಂದು ಬಸವಣ್ಣ ಎಲ್ಲಿದ್ದಾನೆ ಎಂದು ಕೇಳಿದ್ದಾನೆ. ಬಳಿಕ ಡಿಚ್ಚಿ ಮುಬಾರಕ್ ಜೈಲಿನಿಂದ ಎರಡು ಪ್ರತ್ಯೇಕ ಫೋನ್ ನಂಬರ್ ನಿಂದ ಕರೆ ಮಾಡಿ ಬಸವಣ್ಣನನ್ನು ಮುಗಿಸುವ ಡೀಲ್ ನಡೆದಿದೆ ಎಂದು ಹೇಳಿದ್ದಾನೆ. ಇದನ್ನು ಕೇಳಿಸಿಕೊಂಡ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದಾನೆ.
ಅಲ್ಲದೇ 17ರಂದು ರಂಗಪ್ಪ ಸರ್ಕಲ್ ಬಳಿ ಸಿಕ್ಕ ಟಿಪ್ಪು ಬಾರ್ ವೊಂದರಲ್ಲಿ ಕುಳಿತು ಡಿಚ್ಚಿ ಮುಬಾರಕ್ ಡೀಲ್ ಕೊಟ್ಟಿದ್ದು, ಅದರಂತೆ ಚಾಕು ತಂದಿದ್ದೇನೆ ಎಂದು ಮುಬ್ಬುಗೆ ತೋರಿಸಿರುವ ಬಗ್ಗೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಡಿಚ್ಚಿ ಮುಬಾರಕ್, ಟಿಪ್ಪು ಸೇರಿದಂತೆ ನಾಲ್ವರ ವಿರುದ್ಧ ಗುತ್ತಿಗೆದಾರ ಸುನೀಲ್ ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.