ಸಚಿವ ಬೈರತಿ ಸುರೇಶ್ ಪುತ್ರ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಪುತ್ರಿಯ ವಿವಾಹ ನಿಶ್ಚಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿದೆ.
ರಾಜ್ಯದ ನಗರಾಭಿವೃದ್ಧಿ ಸಚಿವರಾಗಿರುವ ಬೈರತಿ ಸುರೇಶ್ ಮಗ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಮಗಳು ಮುಂದಿನ ವರ್ಷ ವಿವಾಹವಾಗಲಿದ್ದಾರೆ. ಇಂದು ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಇದು ಲವ್ ಕಮ್ ಆರೆಂಜ್ ಮ್ಯಾರೇಜ್ ಎಂದು ತಿಳಿದುಬಂದಿದೆ.
ಬುಧವಾರ ಖಾಸಗಿ ಹೋಟೆಲ್ನಲ್ಲಿ ವಿಶ್ವನಾಥ್ ಪುತ್ರಿ ಅಪೂರ್ವ ಹಾಗೂ ಬೈರತಿ ಸುರೇಶ್ ಪುತ್ರ ಸಂಜಯ್ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಎರಡೂ ಪಕ್ಷದ ರಾಜಕೀಯ ನಾಯಕರು ಆಗಮಿಸಿ ಭಾವಿ ದಂಪತಿಗಳಿಗೆ ಶುಭ ಆರೈಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಡಾ ಎಂ ಸಿ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಹಲವು ಕಾಂಗ್ರೆಸ್ ನಾಯಕರು, ಮುನಿರತ್ನ, ಬೈರತಿ ಬಸವರಾಜು ಸೇರಿ ಹಲವು ಬಿಜೆಪಿ ನಾಯಕರು ಕೂಡ ಭಾಗವಹಿಸಿದ್ದರು.