ಮಂಗಳೂರು: ಭಾರೀ ಮಳೆಗೆ ಮನೆಯೊಂದು ಕುಸಿದಿರುವ ಘಟನೆ ಬಜಾಲ್ ಫೈಸಲ್ ನಗರದಲ್ಲಿ ನಡೆದಿದೆ.
ಘಟನೆಯ ವೇಳೆ ಮನೆಯಲ್ಲಿದ್ದ ಅಜ್ಜಿ ಮತ್ತು ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ.
ಯಮುನಾ ಎಂಬವರಿಗೆ ಸೇರಿದ ಮನೆ ಕುಸಿತವಾಗಿದೆ. ಮನೆ ಕುಸಿಯುವ ವೇಳೆ ಯಮುನಾರ ತಾಯಿ ಮತ್ತು ಮಗಳು ಮನೆಯಲ್ಲಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಕಾರ್ಪೊರೇಟರ್ ಅಶ್ರಫ್ ಬಜಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.