ಬೆಂಗಳೂರಿನಲ್ಲಿ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದ ಪುಂಡರ ಕೃತ್ಯದಿಂದ ಬೇಸತ್ತ ಸಾರ್ವಜನಿಕರು, ವೀಲಿಂಗ್ ಮಾಡುತ್ತಿದ್ದವರ ಸ್ಕೂಟರ್ ಗಳನ್ನು ಕಿತ್ತುಕೊಂಡು ನೆಲಮಂಗಲ ಮೇಲ್ಸೇತುವೆಯಿಂದ ಕೆಳಗೆ ಎಸೆದಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರರು ಸೇರಿದಂತೆ ಇಬ್ಬರು ಯುವಕರು ತಮ್ಮ ಸ್ಕೂಟರ್‌ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು.
ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರಲ್ಲಿ ಒಬ್ಬ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಾಹನ ಸವಾರರು ಆತನ ಮತ್ತು ಮತ್ತೊಬ್ಬ ಯುವಕನ ಸ್ಕೂಟರ್ಅನ್ನು ಫ್ಲೈಓವರ್ ನಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರು ಮತ್ತು ಹಿಂಬದಿ ಸವಾರರು ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಪರಿಸ್ಥಿತಿ ತಿಳಿಗೊಳಿಸಿ ಸ್ಕೂಟರ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.