Breaking:

BIG News ಬೆಂಗಳೂರು ಏರ್ ಪೋರ್ಟ್ ನಲ್ಲೇ ವ್ಯಕ್ತಿಯೋರ್ವನ ಬರ್ಬರ ಕೊಲೆ

ಬೆಂಗಳೂರಿನ ಏರ್ ಪೋರ್ಟ್ ನಲ್ಲಿಯೇ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1ರಲ್ಲೇ ಟ್ರಾಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಂತಹ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.



ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ಟ್ರಾಲಿ ಆಪರೇಟರ್ ಒಬ್ಬನನ್ನು ಆಕೆಯ ಪತಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವುದಾಗಿ ಹೇಳಲಾಗುತ್ತಿದೆ.

ಸ್ಥಳಕ್ಕೆ ಏರ್ ಪೋರ್ಟ್ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this article

ಟಾಪ್ ನ್ಯೂಸ್