ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈವರೆಗೆ ಮೃತರ ಸಂಖ್ಯೆ 105 ತಲುಪಿದೆ.
ಈ ಮಧ್ಯೆ ಅಲ್ಲಿನ ನಾಗರಿಕರು ದೇಶದ ಗಡಿ ದಾಟಿ ಭಾರತಕ್ಕೆ ಪಲಾಯನ ಮಾಡುತ್ತಿರುವುದು ಕಂಡು ಬಂದಿದೆ. ಭಾರತ, ನೇಪಾಳ ಮತ್ತು ಭೂತಾನ್‌ನ 360ಕ್ಕೂ ಹೆಚ್ಚು ನಾಗರಿಕರು ಶುಕ್ರವಾರ ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಮೇಘಾಲಯಕ್ಕೆ ಬಂದಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂಸಾಚಾರದಿಂದಾಗಿ ರಾಜ್ಯಕ್ಕೆ ಆಶ್ರಯ ಅರಸಿ ಬಂದವರ ಸಂಖ್ಯೆ 670ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದ್ವಾಕಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಮೂಲಕ 363 ಮಂದಿ ಮೇಘಾಲಯ ತಲುಪಿದ್ದಾರೆ ಎಂದು ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆ ಪೈಕಿ 204 ಭಾರತೀಯರು, 158 ನೇಪಾಳಿಗಳು ಮತ್ತು ಓರತವ ಭೂತಾನ್ ಪ್ರಜೆ ಇದ್ದಾರೆ.
ಇದುವರೆಗೆ ವಿದ್ಯಾರ್ಥಿಗಳು ಸೇರಿದಂತೆ ಮೇಘಾಲಯದ 80 ನಾಗರಿಕರು ರಾಜ್ಯಕ್ಕೆ ಹಿಂತಿರುಗಿದ್ದಾರೆ.