ಬೆಂಗಳೂರು: ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್‌ನಲ್ಲಿ ಇಂದು ಬೆಳಗ್ಗೆ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಆರೋಪಿ ಜಯರಾಮನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಕೀಲೆ ವಿಮಾಲ ಮತ್ತು ಜಯರಾಮ ಇಬ್ಬರು ಸ್ನೇಹಿರು. ಇಬ್ಬರು ಇದ್ದ ಖಾಸಗಿ ಕ್ಷಣಗಳನ್ನು ಜಯರಾಮ್ ಮೊಬೈಲ್ನಲ್ಲಿ ಶೂಟ್ ಮಾಡಿಕೊಂಡು ಬ್ಲಾಕ್ ಮೇಲೆ ಮಾಡಿ ಕೋಟಿಗಟ್ಟಲೆ ಹಣ ಪೀಕಿದ್ದಾನೆ. ನಂತರ ಜಮೀನು ವಿಷಯವಾಗಿ ಇಬ್ಬರಿಗೆ ಜಗಳವಾಗಿ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು ಜಾಗದ ವಿಚಾರವಾಗಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಮಂಗಳವಾರ ಇಬ್ಬರೂ ವಿಚಾರಣೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ವಿಚಾರಣೆಗೆಂದು ಹಾಜರಾಗಿದ್ದರು. ಈ ವೇಳೆ ಆರೋಪಿ ಜಯರಾಮ, ವಕೀಲೆ ವಿಮಲಾಗೆ ಕೋರ್ಟ್ ಹಾಲ್‌ನಲ್ಲಿ ಚಾಕು ಇರಿದಿದ್ದಾನೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.