Breaking:

ಹಿಟ್ ಆಂಡ್ ರನ್ ಗೆ 21 ವರ್ಷದ ಯುವಕ ಬಲಿ

ಹಿಟ್ ಆಂಡ್ ರನ್​ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ.

ಆಯುಷ್ ಅಪ್ಪಯ್ಯ (21) ಮೃತ ಯುವಕ. ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಜಂಕ್ಷನ್ ಕಡೆಗೆ ಡಿಯೋ ಬೈಕ್​ನಲ್ಲಿ ಯುವಕ ಹೋಗುತ್ತಿದ್ದನು. ಈ ವೇಳೆ ಕನ್ನಿಂಗ್ ಹ್ಯಾಮ್ ರಸ್ತೆಯ ವಕ್ಫ್ ಬೋರ್ಡ್ ಬಳಿ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಘಟನೆಯಲ್ಲಿ ಯುವಕನ ತಲೆಗೆ ಗಂಭೀರವಾದ ಗಾಯವಾಗಿದೆ. ಬಳಿಕ ಕೆಲವರು  ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆತ ಮೃತಪಟ್ಟಿದ್ದಾನೆ.

ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗಾಗಿ ಮುಂದಾಗಿದ್ದಾರೆ.

ಈ ಕುರಿತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್