Breaking:

ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅರೆಸ್ಟ್

ಬೆಂಗಳೂರು; ಜ್ಯುವೆಲ್ಲರಿ ಅಂಗಡಿ ಆರಂಭಿಸಲು ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲಿ  ಚಿನ್ನ ಮತ್ತು ಬೆಳ್ಳಿಯನ್ನು ಕಳವು ಮಾಡಿದ್ದ  ಆರೋಪಿಯನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಪ್ರಮೋದ್‌ ಕುಮಾರ್‌(52) ಬಂಧಿತ ಆರೋಪಿಯಾಗಿದ್ದಾನೆ.

ಬಂಧಿತನಿಂದ 20.75 ಲಕ್ಷ ಮೌಲ್ಯದ 300 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 954 ಗ್ರಾಂ ಬೆಳ್ಳಿ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.

ಮಾಲಕ ಕಾಂತಿಲಾಲ್‌ ನೀಡಿದ ದೂರಿನ ಮೇರೆಗೆ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್‌ ಭಾಗ್ಯವತಿ ಕೆ.ಬಂಟಿ ನೇತೃತ್ವದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮೋದ್‌ ಉತ್ತಮವಾಗಿ ಕೆಲಸ ಮಾಡಿ ಮಾಲಕರ ನಂಬಿಕೆ ಗಿಟ್ಟಿಸಿದ್ದ. ಹೀಗಾಗಿ ಮಾಲಕ ಕಾಂತಿಲಾಲ್‌ ಕೆಲಸದ ಮೇಲೆ ಹೊರಗೆ ಹೋಗುವಾಗಲೆಲ್ಲ ಪ್ರಮೋದ್‌ಗೆ ಜ್ಯುವೆಲ್ಲರಿ ಅಂಗಡಿ ಜವಾಬ್ದಾರಿ ವಹಿಸುತ್ತಿದ್ದ.

ಕಳೆದ ಮಾರ್ಚ್‌ನಲ್ಲಿ ಯಾರಿಗೂ ಹೇಳದೆ ಪ್ರಮೋದ್‌ ಕೆಲಸ ಬಿಟ್ಟು ನಾಪತ್ತೆಯಾಗಿದ್ದ. ಈ ವೇಳೆ ಮಾಲಕ ಕಾಂತಿಲಾಲ್ ಅಂಗಡಿಯ ಆಭರಣಗಳನ್ನು ಪರಿಶೀಲಿಸಿದಾಗ ಕೆಲವು ಚಿನ್ನಾಭರಣಗಳು ಹಾಗೂ ಬೆಳ್ಳಿ ಸಾಮಾಗ್ರಿಗಳು ಕಳ್ಳತನವಾಗಿರುವುದು ಕಂಡು ಬಂದಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು.

Share this article

ಟಾಪ್ ನ್ಯೂಸ್