ಬಂಟ್ವಾಳ: ಪೆಂಡಾಲ್ ಹಾಕುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ
ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮದ್ಯಾಹ್ನ ನಡೆದಿದೆ.
ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದು, ಕಡೇಶ್ವಾಲ್ಯ ಗ್ರಾಮದ ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.