Breaking:

ಬಂಟ್ವಾಳ; ಡೆತ್ ನೋಟು ಬರೆದಿಟ್ಟು ಶಾಲಾ ಬಾಲಕ ಆತ್ಮಹತ್ಯೆ

ಬಂಟ್ವಾಳ; ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟ‌ನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ನಡೆದಿದೆ.

ಸಾಯಿಶಾಂತಿ ಎಂಬವರ ಪುತ್ರ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಂಜಾನೆ 5 ಗಂಟೆ ಹೊತ್ತಿಗೆ ಕೆರೆ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ಮುನ್ನ ಬಾಲಕ ಡೆತ್ ನೋಟು ಬರೆದಿಟ್ಟಿದ್ದಾನೆ ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this article

ಟಾಪ್ ನ್ಯೂಸ್