ಬಂಟ್ವಾಳ; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್ ಪೂಜಾರಿ (34) ಎಂದು ಗುರುತಿಸಲಾಗಿದೆ.
ತಿಲಕ್ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ವಕೀಲಿಕೆಗೆ ಪದವಿ ಪಡೆದರೂ ಸರಿಯಾದ ಅವಕಾಶ ಸಿಗದೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.