ಬಂಟ್ವಾಳ; ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನಿವಾಸಿಗಳಾದ ಅಶ್ವಥ್, ಶರಣ್ ಮತ್ತು ವಸಂತ ಎಂಬವರು ಬಂಧಿತ ಆರೋಪಿಗಳು. ಇನ್ನುಳಿದವರ ಪತ್ತೆಗೆ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಬಂಟ್ವಾಳ ಬೈಪಾಸ್ ಎಂಬಲ್ಲಿ ಎರಡು ತಂಡಗಳ ನಡುವೆ ಪರಸ್ಪರ ಗಲಾಟೆ ನಡೆದಿದೆ. ಬಳಿಕ ಚೂರಿಯಿಂದ ಇರಿದು ಒಂದು ತಂಡ ಪರಾರಿಯಾಗಿತ್ತು. ಘಟನೆಯಲ್ಲಿ ಪೃಥ್ವಿರಾಜ್ ಮತ್ತು ವಿನೀತ್ ಅವರು ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.