ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಸಿವಿಲ್ ಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ.
ಇದಲ್ಲದೆ ವಕೀಲ ಜಗದೀಶ್ ಮಹದೇವ್ ವಿರುದ್ಧವು ಕೂಡ ನಿರ್ಬಂಧಕಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿ ಪ್ರಸಾರ ಮಾಡಿದಂತೆ ದಾವೇ ಹೂಡಿದ್ದಾರೆ. ಬಸವರಾಜ್ ಬೊಮ್ಮಾಯಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಳೆ ಕೋರ್ಟ್ ಆದೇಶ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.