Breaking:

ಹುಟ್ಟು ಹಬ್ಬದ ದಿನವೇ ಇಬ್ಬರು ಯುವಕರು ಅಪಘಾತದಲ್ಲಿ ಮೃತ್ಯು

ಭೀಕರ ಅಪಘಾತದಲ್ಲಿ ಬರ್ತ್ ಡೆ ಪಾರ್ಟಿ ಮುಗಿಸಿ ವಾಪಾಸ್ಸಾಗುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಬೀದರ್ ಜಿಲ್ಲೆ ಔರಾದ್‌ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ನಡೆದಿದೆ.

ಔರಾದ್‌ ತಾಲೂಕಿನ ಬೇಲೂರ್‌ (ಎನ್)‌ ಗ್ರಾಮದ ಹಣಮಂತ ಚನ್ನಪ್ಪ (20), ಗಣೇಶ ಧನರಾಜ್ (19) ಮೃತರು.

ಹಣಮಂತನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜಂಬಗಿ ಗ್ರಾಮದಲ್ಲಿ ಬರ್ತಡೇ ಪಾರ್ಟಿ ಮುಗಿಸಿ ಇಬ್ಬರೂ ಬೈಕ್‌ನಲ್ಲಿ ವಾಪಸ್ಸಾಗುವಾಗ ಬೈಕ್‌ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ‌. ಈ ವೇಳೆ ಇಬ್ಬರೂ ರಸ್ತೆ ಪಕ್ಕದ ಕಂದಕದಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಕುರಿತು ಸಂತಪೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್