Breaking:

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ, ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದು, ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡಲು ಪ್ರೇರಣೆ ನೀಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರ ನೇತೃತ್ವದ ನಿಯೋಗ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದೆ.

ಬೆಳ್ತಂಗಡಿಯ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ, ಈ ದೇಶಕ್ಕೆ ಕೇವಲ ಶಾಂತಿಯಿಂದ, ಕೇವಲ ಚರಕ ತಿರುಗಿಸಿದರಿಂದ ಸ್ವಾತಂತ್ರ್ಯ ಬಂದಿಲ್ಲ ಎಂದು ಹೇಳಿದ್ದು, ಸರ್ಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಮತ್ತು ಸಮಾಜದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Share this article

ಟಾಪ್ ನ್ಯೂಸ್