ಬೆಳ್ತಂಗಡಿ; ಅವಿವಾಹಿತ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ನಿಟ್ಟಡೆ ಗ್ರಾಮದಲ್ಲಿ ನಡೆದಿದೆ.
ದಿ| ಎಲ್ಲಪ್ಪ ಪೂಜಾರಿ ಪುತ್ರ ಸತೀಶ್ ಪೂಜಾರಿ (36) ಅವರು ಆ. 21ರಂದು ಬೆಳಗ್ಗೆ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.