Breaking:

ಬೆಳ್ತಂಗಡಿ; ಭಾರೀ ಮಳೆ ಹಿನ್ನೆಲೆ; ಇಂದು ತಾಲೂಕಿನ ಶಾಲೆಗಳಿಗೆ ರಜೆ

ಬೆಳ್ತಂಗಡಿ; ಭಾರೀ ಮಳೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕಿನಲ್ಲಿ  ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು, ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Share this article

ಟಾಪ್ ನ್ಯೂಸ್