ಮಂಗಳೂರು: ನಗರದ ಹಳೆ ಬಂದರ್‌ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಬೆಂಗರೆಯ ಅಶ್ಫಾನ್ (30) ಮೃತ ಯುವಕ. ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು. ಬಳಿಕ ಅಶ್ಫಾನ್ ಗಾಗಿ ಹುಡುಕಾಟ ನಡೆದಿತ್ತು. ರಾತ್ರಿ ವೇಳೆ ಆತನ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.