ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ತಡೆ ನೀಡಿರುವ ಆದೇಶಕ್ಕೆ ತೆರವು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯ್ಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಯಡಿಯೂರಪ್ಪರನ್ನು ಬಂಧಿಸಿದಂತೆ ನೀಡಿದ್ದ ಆದೇಶವನ್ನು ತೆರವು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯ್ಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ರಕ್ಷಣೆಗೆ ನೀಡಿತ್ತು.
ಇದೀಗ ಅಶೋಕ್ ನಾಯ್ಕ್ ಅವರು ಮಧ್ಯಂತರ ತಡೆ ಆದೇಶವನ್ನು ತೆರವು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು,ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.