Breaking:

ಬಂಟ್ವಾಳ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬೆಳಿಗ್ಗೆ ನಡೆದಿದೆ.

ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share this article

ಟಾಪ್ ನ್ಯೂಸ್