Breaking:

ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ; ಆತ್ಮಹತ್ಯೆಗೆ ಮೊದಲು ಹಾಕಿದ ಪೋಸ್ಟ್‌ನಲ್ಲಿ ಏನಿದೆ?

ಸಾಹಿತಿ ಹಾಗೂ ಪರಿಸರವಾದಿಯಾಗಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಭಾನುವಾರ ತಡ ರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪುಟ್ಟಸ್ವಾಮಿ ಅವರ ಕುಟುಂಟ ಮೈಸೂರಿನಲ್ಲಿ ನೆಲೆಸಿದೆ.  ಪುಟ್ಟಸ್ವಾಮಿ ಅವರು ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡ ಜೀವನ ಯಾತ್ರೆ ಮುಗಿಸುತ್ತಿದ್ದೇನೆ. 28.07.24 ರಾತ್ರಿ 2.40 ಇಂತಿ ಭೂಹಳ್ಳಿ ಪುಟ್ಟಸ್ವಾಮಿ ಎಂದು ಪೋಸ್ಟ್ ಮಾಡಿ ಚನ್ನಪಟ್ಟಣದಲ್ಲಿ ನೇಣಿಗೆ ಶರಣಾಗಿದ್ದಾರೆ.

ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದ ಪುಟ್ಟಸ್ವಾಮಿ  ಸಾಹಿತಿಯಾಗಿದ್ದರು. ಸುಮಾರು 25ಕ್ಕೂ ಹೆಚ್ಚು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ.

Share this article

ಟಾಪ್ ನ್ಯೂಸ್