ಸುನೀತಾ ವಿಲಿಯಂ, ವಿಲ್ಮೋರ್ ಅವರನ್ನು ಬಾಹ್ಯಾಕಾಶದಲ್ಲೇ ಬಿಟ್ಟು ಭೂಮಿಗೆ ವಾಪಾಸ್ಸಾದ ಸ್ಟಾರ್ ಲೈನರ್
ಗಗನಯಾತ್ರಿಗಳಾದ ಸುನೀತಾ ವಿಲಿಯಂ ಹಾಗೂ ಬುಚ್ ವಿಲ್ಮೋರ್ ಅವಬಾಹ್ಯಾಕಾಶಕ್ಕೆ ಕರೆದೊಯ್ದಿದ್ದ ಬಾಹ್ಯಾಕಾಶ ನೌಕೆ ಸ್ಟಾರ್‌ಲೈನರ್ ಅವರಿಬ್ಬರನ್ನೂ ಅಲ್ಲೇ ಬಿಟ್ಟು ಭೂಮಿಗೆ ಮರಳಿದೆ. ಬೋಯಿಂಗ್ ಸಂಸ್ಥೆಯ ನೌಕೆ ಸ್ಟಾರ್‌ಲೈನರ್‌ನಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ, ಅದರಲ್ಲಿ ಗಗನಯಾತ್ರಿಗಳನ್ನು ಕರೆಸಿಕೊಳ್ಳುವ ರಿಕ್ಸ್ ತೆಗೆದುಕೊಳ್ಳಲು ಇಚ್ಛಿಸದ ನಾಸಾ (NASA),ಅವರಿಲ್ಲದೇ ಸ್ಟಾರ್‌ಲೈನರ್ ಅನ್ನು ಮರಳಿ ತರಿಸಿದೆ. ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಇದೀಗ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (Internationa Space Station – ISS) ಉಳಿದಿದ್ದಾರೆ. ತಡರಾತ್ರಿ ಐಸ್‌ಎಸ್‌ನಿಂದ ಕಳಚಿಕೊಂಡು ಹೊರಟ ಕ್ಯಾಪ್ಸುಲ್, […]
ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಣ್ಣಿಟ್ಟ ಜೈ ಶಾ: ಅಮಿತ್ ಶಾ ಪುತ್ರನಿಗೆ ನೀಡುತ್ತಾ 16 ರಾಷ್ಟ್ರಗಳು ಬೆಂಬಲ?
ಬಿಸಿಸಿಐ ಕಾರ್ಯದರ್ಶಿಯಾಗಿರುವ ಜೈ ಶಾ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಇದಕ್ಕೆ 16 ರಾಷ್ಟ್ರಗಳ ಒಪ್ಪಿಗೆ ಬೇಕಾಗಿದೆ. ಜೈಶಾಗೆ ಭಾರತ, ಆಫ್ಘಾನಿಸ್ತಾನ್, ಆಸ್ಟ್ರೇಲಿಯಾ, ಬಾಂಗ್ಲಾದೇಶ , ಇಂಗ್ಲೆಂಡ್, ಐರ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ ದೇಶಗಳು ಬೆಂಬಲ ನೀಡಬೇಕಾಗಿದೆ. ಈ 16 ರಾಷ್ಟ್ರಗಳು ಕೂಡ ಮತದಾನದ ಅಧಿಕಾರ ಹೊಂದಿವೆ. ಮುಂದಿನ ನವೆಂಬರ್ ನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಗ್ರೇಗ್ ಬರ್ಕಲಿ ಅವರ ಅಧಿಕಾರವಧಿ ಮುಕ್ತಾಯವಾಗಲಿದೆ.ಅವರ ಜಾಗಕ್ಕೆ ಅಮಿತ್ ಶಾ […]
ವಿದಾಯ ಭಾಷಣ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾವುಕ
ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಸೋಮವಾರ ರಾತ್ರಿ ತಮ್ಮ ರಾಜಕೀಯದ ಕೊನೆಯ ಭಾಷಣ ಮಾಡಿದ್ದು ಈ ವೇಳೆ ನೆರೆದಿದ್ದ ಜನಸಮೂಹ ಚಪ್ಪಾಳೆಯ ಸುರಿಮಳೆ ಗೈದಿದ್ದಾರೆ. ಭಾಷಣದ ವೇಳೆ ಬೈಡನ್ ಭಾವುಕರಾದ ಪ್ರಸಂಗವು ನಡೆಯಿತು. ಡೆಮಾಕ್ರಟಿಕ್ ನ್ಯಾಷನಲ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಜೋ ಬೈಡನ್ಗೆ ಅಮೆರಿಕಾದ ಜನರು ವಿದಾಯ ಹೇಳಿದರು. ಸಮಾವೇಶದಲ್ಲಿ ನೆರೆದಿದ್ದವರು, ಡೆಮಾಕ್ರಟಿಕ್ ನ್ಯಾಷನಲ್ ಪಕ್ಷದ ಬೆಂಬಲಿಗರು ನಿರಂತರ 4 ನಿಮಿಷಗಳ ಕಾಲ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ತಮ್ಮ ಅಧ್ಯಕ್ಷನನ್ನು ಬೀಳ್ಕೊಟ್ಟರು. ಕೆಲವೊಂದು […]
ಆಫ್ರಿಕನ್ ದೇಶದಲ್ಲಿ ಏಕಾಏಕಿ ಉಲ್ಬಣಗೊಂಡ ಎಂಪಾಕ್ಸ್ ವೈರಸ್: ಮನುಷ್ಯನಿಂದ ಮನುಷ್ಯನಿಗೆ ಹರಡುವ ಈ ವೈರಸ್ ಬಗ್ಗೆ ಜಗತ್ತಿಗೆ ಹೆಚ್ಚಿದ ಭೀತಿ
ಎಂಪಾಕ್ಸ್ ವೈರಸ್ ಆಫ್ರಿಕನ್ ದೇಶದಲ್ಲಿ ಏಕಾಏಕಿ ಉಲ್ಬಣಗೊಂಡಿದೆ. ಈ ಹಿಂದೆ ಮಂಕಿಪಾಕ್ಸ್ ಎಂದು ಕರೆಯಲ್ಪಡುವ ಈ ವೈರಸ್ ವೇಗವಾಗಿ ಹರಡುವ ಕಾಯಿಲೆಯಾಗಿದ್ದು, ಇದನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಚರ್ಚೆ ನಡೆಸುತ್ತಿದೆ. ಆಫ್ರಿಕನ್ ದೇಶಗಳಲ್ಲಿ ಎಂಪಾಕ್ಸ್ ವೈರಸ್‌ನ ಮಾರಣಾಂತಿಕ ರೂಪಾಂತರದ ಪ್ರಕರಣಗಳ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಬುಧವಾರ ಅಂತರಾಷ್ಟ್ರೀಯ ತಜ್ಞರ ತುರ್ತು ಸಭೆ ಕರೆದಿದ್ದರು. Mpox ವೈರಸ್ ಎಂದರೇನು? ಮಂಕಿಪಾಕ್ಸ್ ಎಂದು […]
ಸೌದಿ ಅರೇಬಿಯಾ; ಹವಾಂತರ ಸೃಷ್ಟಿಸಿದ ಮಳೆ; 9 ಮಂದಿ ಮೃತ್ಯು
ಜೆದ್ದಾ: ಸೌದಿ ಅರೇಬಿಯಾದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ನೈಋತ್ಯ ಪ್ರದೇಶದ ಜೀಝಾನ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಜಸ್ಸಾನ್ ನ ಸಬಿಯಾ ಮತ್ತು ಅಬು ಅರಿಶ್ ಪ್ರದೇಶಗಳನ್ನು ಸಂಪರ್ಕಿಸುವ ಸೇತುವೆ ಭಾಗಶಃ ಕುಸಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. ಈಗೆ ಸೌದಿ ಅರೇಬಿಯಾದ ವಿವಿಧೆಡೆ ಇಂದು ಸುರಿದ ಭಾರೀ ಮಳೆಗೆ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಜಪಾನ್ ನಲ್ಲಿ ಪ್ರಬಲ ಭೂಕಂಪನ; ಸುನಾಮಿ ಎಚ್ಚರಿಕೆ, ಆತಂಕದಲ್ಲಿ ಜನ
ಜಪಾನ್ ನ ಕ್ಯೂಶು ಪ್ರದೇಶದ ಮಿಯಾಝಾಕಿ ಪ್ರಾಂತ್ಯದ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪನವು ಸಂಭವಿಸಿದೆ. ಭೂಕಂಪನದ ಜೊತೆ ಸುನಾಮಿ ಎಚ್ಚರಿಕೆಯನ್ನು ಕೂಡ ನೀಡಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಜಪಾನಿನ ಕ್ಯೂಶು ದ್ವೀಪದಾದ್ಯಂತ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಭೂಕಂಪ ಸಂಭವಿಸಿದ ಸ್ಥಳದಲ್ಲಿನ ಸಾವು- ನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
ದೇಶ ತೊರೆದ ಶೇಖ್ ಹಸೀನಾಗೆ ವ್ಯಂಗ್ಯ ಮಾಡಿದ ವಿವಾದಾತ್ಮಕ ಲೇಖಕಿ ತಸ್ಲೀಮಾ ನಸ್ರೀನ್
ಬಾಂಗ್ಲಾದೇಶದಲ್ಲಿ ವ್ಯಾಪಕ ಹಿಂಸಾಚಾರದಿಂದಾಗಿ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಈ ಬಗ್ಗೆ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದಾತ್ಮಕ ಲೇಖಕಿಯಾಗಿರುವ ತಸ್ಲೀಮಾ ನಸ್ರೀನ್, ಇಸ್ಲಾಂಮಿಸ್ಟ್ ಗಳನ್ನು ಮೆಚ್ಚಿಸಲು ಶೇಖ್ ಹಸೀನಾ ನನ್ನನ್ನು ಬಾಂಗ್ಲಾದೇಶದಿಂದ ಹೊರ ಹಾಕಿದ್ದರು. ಈಗ ಅದೇ ಜನರು ವಿದ್ಯಾರ್ಥಿ ಚಳವಳಿ ಮೂಲಕ ಶೇಖ್ ಹಸೀನಾ ಅವರನ್ನು ದೇಶ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ನಾನು 1999ರಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ತಾಯಿಯನ್ನು ನೋಡಲು ಬಾಂಗ್ಲಾಕ್ಕೆ […]
ಹಸೀನಾ ಬಾಂಗ್ಲಾದೇಶ ತೊರೆಯುತ್ತಿದ್ದಂತೆ ಜೈಲಿನಿಂದ ಮಾಜಿ ಪ್ರಧಾನಿ ಖಲೀದಾ ಜಿಯಾ ಬಿಡುಗಡೆ
ಬಾಂಗ್ಲಾದೇಶದಲ್ಲಿ ವ್ಯಾಪಕವಾದ ಹಿಂಸಾಚಾರದ ಬೆನ್ನಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದರ ಬೆನ್ನಲ್ಲಿ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್, ಜೈಲಿನಲ್ಲಿದ್ದ ವಿರೋಧ ಪಕ್ಷದ ನಾಯಕಿ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ವಿರೋಧ ಪಕ್ಷದ ಸದಸ್ಯರೊಂದಿಗೆ ಚರ್ಚಿಸಿದ ನಂತರ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ ಪಿ) ಅಧ್ಯಕ್ಷರನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಅಧ್ಯಕ್ಷ […]
ಬಾಂಗ್ಲಾದೇಶದ ಪ್ರಧಾನಿ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ ಪ್ರತಿಭಟನಾಕಾರರು; ಶ್ರೀಲಂಕಾ ಬಿಕ್ಕಟ್ಟನ್ನು ಮರು ನೆನಪಿಸಿದ ಘಟನೆ
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನೂರಾರು ಮಂದಿ ಬಾಂಗ್ಲಾದೇಶಿಯರು ಮೃತಪಟ್ಟಿದ್ದಾರೆ. ಹಿಂಸಾಚಾರ ವ್ಯಾಪಕವಾಗುತ್ತಿದ್ದಂತೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಬಂದಿಳಿದಿದ್ದಾರೆ. ಈ ಮಧ್ಯೆ ವಿದ್ಯಾರ್ಥಿಗಳು ಬಾಂಗ್ಲಾದೇಶದ ಪ್ರಧಾನಿಯ ಮನೆಗೆ ನುಗ್ಗಿದ್ದು, ಪ್ರಧಾನಿ ಮಲಗುತ್ತಿದ್ದ ಮಂಚದ ಮೇಲೆ ಮಲಗಿ ದುಸ್ಸಾಹಾಸ ಮೆರೆದಿದ್ದಾನೆ. ವಿದ್ಯಾರ್ಥಿಗಳು ಪ್ರಧಾನಿ ಮನೆಯ ಒಳಗಡೆ ನುಗ್ಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸರ್ಕಾರಿ ಉದ್ಯೋಗಕ್ಕೆ ಮೀಸಲಾತಿ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕಕ್ಕೇರಿದ್ದು, ಪ್ರತಿಭಟನಾಕಾರರು ನುಗ್ಗುವ ಮುನ್ನವೇ ಅಪಾಯದ ಮುನ್ಸೂಚನೆ […]
ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥರ ಹತ್ಯೆ; ವರದಿ
ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೆಹ್ ಅವರನ್ನು ಇರಾನ್‌ನ ಟೆಹ್ರಾನ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮೂಲದ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಪ್ರೆಸ್ ಟಿವಿ ವರದಿ ಪ್ರಕಾರ, ಹಮಾಸ್ ನ್ನು ನಾಶಮಾಡುವುದಾಗಿ ಈ ಮೊದಲು ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಇಸ್ಮಾಯಿಲ್ ಹನಿಯೆಹ್ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ ಎಂದು ಪ್ರೆಸ್ ಟಿವಿ ವರದಿ ಮಾಡಿದೆ.