Breaking:

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌ಸೆ.16 ರಂದು ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ‌ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ […]

ಉಡುಪಿ; ಸಂಬಂಧಿ ಮಹಿಳೆಯ ಪ್ರಾಣ ರಕ್ಷಿಸಿ ಜೀವ ಕಳೆದುಕೊಂಡ ಉಪನ್ಯಾಸಕಿ

ಉಪನ್ಯಾಸಕಿಯೊಬ್ಬರು ಸಂಬಂಧಿಯೊಬ್ಬರ ಜೀವ ಉಳಿಸಿಲು ಹೋಗಿ ತಮ್ಮದೇ ಪ್ರಾಣ ಕಳೆದಕೊಂಡ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ನಡೆದಿದೆ‌. ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಉಪನ್ಯಾಸಕಿಯಾಗಿ ಕೆಲ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಕಾಮತ್‌(34) ಜೀವ ಕಳೆದುಕೊಂಡವರು. ಮೃತರು ಪತಿ ಚಾರ್ಟರ್ಡ್‌ ಅಕೌಂಟೆಂಟ್‌ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಅರ್ಚನಾ ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ […]

ಕಾಟಿಪಳ್ಳ ಮಸೀದಿಗೆ ಕಲ್ಲೆಸೆತ ಪ್ರಕರಣ; ಐವರು ಆರೋಪಿಗಳ ಬಂಧನ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ಆರೋಪಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು.

ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ!

ಕೋಲಾರ: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ […]

ಉಪ್ಪಿನಂಗಡಿ: ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ:  ಅಪ್ರಾಪ್ತ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ಆರೋಪಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ‌. ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಜೂನ್ 14 ರಂದು ಸ್ಥಳೀಯ ಕಾಲೇಜೊಂದರ ವಿಧ್ಯಾರ್ಥಿನಿಯನ್ನು ಆರೋಪಿ ಪರಿಚಯಮಾಡಿಕೊಂಡಿದ್ದ, ಬಳಿಕ ಮೊಬೈಲ್ ಪೋನ್ ನಂಬರ ಪಡೆದು ಆತ್ಮೀಯತೆ ಬೆಳೆಸಿದ್ದಾನೆ. ಈ ನಡುವೆ ಜುಲೈ 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು […]

ಉಳ್ಳಾಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ […]

ಪುತ್ತೂರು: ಅಪಘಾತದ ಗಾಯಾಳು ಉಪನ್ಯಾಸಕಿ ಮೃತ್ಯು; ಜೀವಕ್ಕೆ ಕುತ್ತು ತಂದಿದ್ದ ಕೊಡೆ

ಪುತ್ತೂರು; ಬೈಕಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ […]

ಮಂಗಳೂರು: ಹಸುವೊಂದಕ್ಕೆ ದಯಾಮರಣ; ಏನಿದು ಅಪರೂಪದ ಸುದ್ದಿ?

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯ ವ್ಯಾಪ್ತಿಗೆ ಸೇರಿರುವ ಕೊಲ್ಯ ಎನ್ನುವ ಪ್ರದೇಶದಲ್ಲಿ ಹಸುವೊಂದಕ್ಕೆ ಬುಧವಾರ ದಯಾಮರಣ ನೀಡಿರುವ ಬಗ್ಗೆ ವರದಿಯಾಗಿದೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಸು ಸಾರ್ವಜನಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತಿತ್ತು. ಅನವಶ್ಯಕವಾಗಿ ಜರನ್ನು ತಿವಿಯಲು ಹೋಗುತ್ತಿತ್ತು. ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದ ಹಸುವಿನ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕಳೆದ ಎರಡು ದಿನಗಳಿಂದಲೂ ಇದೇ ವರ್ತನೆ ತೋರಿಸಿದ್ದ ಹಸುವನ್ನು ಸ್ಥಳೀಯರೇ ಸೇರಿ ಕಟ್ಟಿ ಹಾಕಿದ್ದರು. ಇತ್ತೀಚೆಗೆ ಮಹಿಳೆಯೊಬ್ಬರ ಮೇಲೂ ದಾಳಿ ನಡೆಸಿತ್ತು. ಇನ್ನು ಹಸು […]

ನೇಜಾರು ತಾಯಿ- ಮಕ್ಕಳ ಕೊಲೆ ಪ್ರಕರಣ; ಜೈಲಿನಲ್ಲಿ ಉಪವಾಸ ಕುಳಿತ ಆರೋಪಿ ಪ್ರವೀಣ್ ಚೌಗಲೆ

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಅನ್ನ, ನೀರು ಸ್ವೀಕರಿಸದೆ ಉಪವಾಸ ಮುಷ್ಕರ ಹೂಡಿದ್ದಾನೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್, ಆಹಾರ ಸೇವಿಸದೆ ಉಪವಾಸ ಮುಷ್ಕರ ಮಾಡುತ್ತಿದ್ದು, ಪ್ರತ್ಯೇಕ ಸೆಲ್‌ನಿಂದ ಪ್ರಧಾನ ಸೆಲ್‌ಗೆ ಶಿಫ್ಟ್‌ ಮಾಡಲು ಬೇಡಿಕೆ ಇಟ್ಟಿದ್ದಾನೆ. 2023ರ ನವೆಂಬರ್ 12ರಂದು ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು. ಏರ್ ಇಂಡಿಯಾ […]

ಬಂಟ್ವಾಳ: ಭೀಕರ ಕಾರು ಅಪಘಾತ; ನವವಿವಾಹಿತೆ ಸಾವು

ಬಂಟ್ವಾಳ: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ […]