Breaking:

BIG NEWS ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಪಿಎಸ್ಐ ಪರಶುರಾಮ್ ಪ್ರಕರಣದ ಬೆನ್ನಲ್ಲೇ ನಡೆದ ಮತ್ತೊಂದು ಘಟನೆ

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪಿಎಸ್‌ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this article

ಟಾಪ್ ನ್ಯೂಸ್