ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್ ಕಾಯಿದೆಗೆ ಬದಲಾವಣೆಗಳನ್ನು ತರಲು ಸಜ್ಜಾಗಿದೆ, ಆ ಮೂಲಕ ವಕ್ಫ್ ಮಂಡಳಿಯ ಅಧಿಕಾರವನ್ನು ಮರುವ್ಯಾಖ್ಯಾನಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ News18 ವರದಿ ಮಾಡಿದೆ.
ಶುಕ್ರವಾರ ಕೇಂದ್ರ ಸಚಿವ ಸಂಪುಟವು ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ಅಂಗೀಕರಿಸಿದೆ.
ಉದ್ದೇಶಿತ ತಿದ್ದುಪಡಿಗಳ ಪ್ರಕಾರ, ವಕ್ಫ್ ಮಂಡಳಿಗಳು ಮಾಡಿದ ಆಸ್ತಿಗಳ ಮೇಲಿನ ಹಕ್ಕುಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತದೆ. ಅಂತೆಯೇ, ವಕ್ಫ್ ಬೋರ್ಡ್‌ಗಳ ವಿವಾದಿತ ಆಸ್ತಿಗಳಿಗೆ ಕಡ್ಡಾಯ ಪರಿಶೀಲನೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ವಕ್ಫ್ ಮಂಡಳಿಗಳು ಸರಿಸುಮಾರು 8.7 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ಹೊಂದಿದ್ದು, ಒಟ್ಟು 9.4 ಲಕ್ಷ ಎಕರೆ ಪ್ರದೇಶದಲ್ಲಿದೆ. 2013ರಲ್ಲಿ ಯುಪಿಎ ಸರಕಾರ ಮೂಲ ಕಾಯಿದೆಗೆ ತಿದ್ದುಪಡಿ ತಂದು ವಕ್ಫ್ ಮಂಡಳಿಗಳಿಗೆ ಹೆಚ್ಚಿನ ಅಧಿಕಾರ ನೀಡಿತ್ತು.
ಪ್ರಸ್ತಾವಿತ ತಿದ್ದುಪಡಿಗಳು ಕೇಂದ್ರೀಯ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ಮಂಡಳಿಗಳಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯವನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.