Breaking:

ಚಾಮರಾಜನಗರ: ಬಸ್ & ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಮೃತ್ಯು

ಚಾಮರಾಜನಗರ: ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಪಟ್ಟಣದ ಹೊರ ವಲಯದ ಎಪಿಎಂಸಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-766 ರಲ್ಲಿ ನಡೆದಿದೆ.

ಚಾಮರಾಜನಗರ ಅಂಬೇಡ್ಕರ್ ಬಡಾವಣೆ ನಿವಾಸಿಗಳಾದ ಮಹೇಶ್, ದರ್ಶನ್ ಮೃತರು. ಸಚಿನ್ ಮತ್ತು ಚಾಲಕ ಕಿಟ್ಟಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಇವರು ಗುಂಡ್ಲುಪೇಟೆಯಿಂದ ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.

ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

Share this article

ಟಾಪ್ ನ್ಯೂಸ್