Breaking:

ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಕಟ್ಟಡದಿಂದ ಬಿದ್ದು ಮೃತ್ಯು

ಬೆಂಗಳೂರು; ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ತಬ್ರೇಝ್ ಎಂಬಾತ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಚಾಮರಾಜಪೇಟೆಯಲ್ಲಿ ಕೊಲೆ ನಡೆದ 5 ದಿನದ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ತಬ್ರೇಝ್ ಕಟ್ಟಡದಿಂದ ಜಿಗಿದಿದ್ದಾನೆ.

ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿ ತಲೆಮರೆಸಿಕೊಂಡಿದ್ದ ತಬ್ರೇಝ್ ನನ್ನು ಬಂಧಿಸಲು ಪೊಲೀಸರು ಧಾವಿಸಿದಾಗ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದಿಂದ ಜಿಗಿದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ತಬ್ರೇಝ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

9 ವರ್ಷಗಳ ಹಿಂದೆ ಫಾಜಿಲಾ ಹಾಗೂ ತಬ್ರೇಝ್ ವಿವಾಹವಾಗಿದ್ದರು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಪತಿ-ಪತ್ನಿ ನಡುವೆ ವೈಮನಸ್ಸು ಹೆಚ್ಚಾದ ಹಿನ್ನೆಲೆಯಲ್ಲಿ ಫಾಜಿಲಾ ಮಕ್ಕಳೊಂದಿಗೆ ತವರಿಗೆ ಬಂದಿದ್ದಳು. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿದ್ದ ತಬ್ರೇಝ್ ಪತ್ನಿ ಜೊತೆ ಜಗಳವಾಡಿ ಚೂರಿಯಿಂದ ಇರಿದು ಪರಾರಿಯಾಗಿದ್ದ.

Share this article

ಟಾಪ್ ನ್ಯೂಸ್