ಚನ್ನಪಟ್ಟಣದ ಉಪಚುನಾವಣೆ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವೀರಭದ್ರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಡಿಕೆ ಶಿವಕುಮಾರ್, ಮುಂಬರುವ ಚನ್ನಪಟ್ಟಣದ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಎನ್ ಡಿಎ ಮೈತ್ರಿಯಲ್ಲಿ ಈಗಾಗಲೇ ಮಾಜಿ ಸಚಿವ ಸಿಪಿ ಯೋಗೇಶ್ವರ್ ಕೂಡ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ಬಿಜೆಪಿಯಲ್ಲಿ ಸಹಜವಾಗಿ ಅಸಮಾಧಾನ ಕಂಡುಬರುತ್ತಿದೆ. ಇದರ ಲಾಭ ಪಡೆಯಲು ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.