ಚಿಕ್ಕಮಗಳೂರು; ಬುರ್ಖಾ ಧರಿಸಿ ಬಿಕ್ಷೆ ಬೇಡಲು ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡು ತೆರಳುತ್ತಿದ್ದ ಹರೀಶ್ ಎಂಬಾತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬುರ್ಖಾ ತೊಟ್ಟು ನಗರದ ಮಲ್ಲಂದೂರು ರಸ್ತೆಯಲ್ಲಿ ಹರೀಶ್ ಓಡಾಟ ನಡೆಸುವಾಗ ಅನುಮಾನಗೊಂಡು ಜನರು ಹಿಡಿದಿದ್ದಾರೆ.
ಬಾಳೆಹೊನ್ನೂರು ಮೂಲದ ಹರೀಶ್ ಎಂಬಾತನನ್ನು ಸ್ಥಳೀಯರು ಥಳಿಸಿದ್ದಾರೆ. ಭಿಕ್ಷೆ ಬೇಡಲು ಬುರ್ಖಾ ಧರಿಸಿ ಬಂದಿದ್ದಾಗಿ ಯುವಕ ಹೇಳಿಕೆ ನೀಡಿದ್ದಾನೆ. ಆದರೆ ಬುರ್ಖಾ ಒಳಗೆ ಚಾಕು ಇಟ್ಟುಕೊಂಡಿದ್ದ ಬಂದಿದ್ದು, ಸಾಕಷ್ಟು ಅನುಮಾನ ಹುಟ್ಟಿಸಿದ್ದು ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.