Breaking:

BIG NEWS ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ವರದಿಯಾಗಿದೆ.

ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದರು.

Share this article

ಟಾಪ್ ನ್ಯೂಸ್