ರಾಜ್ಯದ ಮಾಜಿ ಸಿಎಂ ಓರ್ವರಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಶೀಘ್ರವೇ ರಿಲೀಸ್ ಆಗಲಿದೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿಕೆಯನ್ನು ನೀಡಿದ್ದು, ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ರಾಜ್ಯದ ಅದರಲ್ಲೂ ಬಿಜೆಪಿಯ ಮಾಜಿ ಸಿಎಂ ಓರ್ವರ ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಇದೀಗ ಭಾರೀ ಕುತೂಹಲ ಮೂಡಿಸಿದ್ದಾರೆ. ಅಲ್ಲದೇ ಆ CDಯು ಭಾರತೀಯ ಜನತಾ ಪಕ್ಷದ ನಾಯಕನದ್ದೇ ಎಂದು ಅವರು ಒತ್ತಿ-ಒತ್ತಿ ಹೇಳಿದ್ದಾರೆ. ಅದು ಯಾರಿಗೆ ಸಂಬಂಧಿಸಿದ ಸಿಡಿ ಎಂಬುವುದು ನ್ಯಾಮಗೌಡ ಅವರು ಸದ್ಯಕ್ಕೆ ಬಹಿರಂಗಪಡಿಸಿಲ್ಲ.
ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ-ಜೆಡಿಎಸ್ ನಾಯಕರು ಮುಡಾ, ವಾಲ್ಮೀಕಿ ಹಗರಣದಲ್ಲಿ ಕಟ್ಟು ಹಾಕಿದ್ದು, ಇದೀಗ ನ್ಯಾಮಗೌಡ ಅವರು ಹೇಳುವ ಮಾತು ನಿಜವಾದರೆ, ಆಗ ಕಾಂಗ್ರೆಸ್ನವರು ಬಿಜೆಪಿ ಮೇಲೆ ಯಾವ ರೀತಿ ಮುಗಿ ಬೀಳಲಿದ್ದಾರೆ ಎಂಬುವುದೇ ದೊಡ್ಡ ಕೂತೂಹಲಕ್ಕೆ ಕಾರಣವಾಗಿದೆ.