ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸ್ಯುಕ್ಯೂಷನ್ ಗೆ ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಇದರ ಬೆನ್ನಲ್ಲಿ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.