ಬಿಜೆಪಿ ಸರ್ಕಾರದ ಸವಧಿಯಲ್ಲಿ ನಡೆದ ಕೋವಿಡ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಸ್ಟಿನ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ವರದಿಯನ್ನು ಸಲ್ಲಿಕೆ ಮಾಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಭಾರೀ ಸದ್ದು ಮಾಡಿತ್ತು.
ವೆಂಟಿಲೇಟರ್, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನಿಖಾ ವರದಿಯನ್ನು ಸಿಎಂ ಅವರಿಗೆ ಸಲ್ಲಿಸುವ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.