Breaking:

ದರ್ಶನ್ & ಗ್ಯಾಂಗ್ ನ್ನು ಬೇರೆ ಜೈಲಿಗೆ ಶಿಪ್ಟ್ ಮಾಡುವಂತೆ ಸಿಎಂ ಸೂಚನೆ

ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇದೆ ವೇಳೆ ದರ್ಶನ್ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಕ್ಕೆ ಸೂಚಿಸಿದ್ದಾರೆ. ಕೊಡಲೇ ಬೇರೆ ಜೈಲಿಗೆ ಸ್ಥಳಾಂತರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜೈಲು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ. ಅಲ್ಲದೆ ಘಟನೆ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ನನಗೆ ನೀಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Share this article

ಟಾಪ್ ನ್ಯೂಸ್