ರಾಷ್ಟ್ರ ರಾಜಧಾನಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಳೆ ಸಂಬಂಧಿತ ಅವಘಡದಲ್ಲಿ ದೆಹಲಿಯಲ್ಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಆಗಸ್ಟ್ 5ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ದೆಹಲಿಯ ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ದುಬೈನಿಂದ ಆಗಮಿಸಬೇಕಾದ ಎಐ918, ಪುಣೆಯಿಂದ ಆಗಮಿಸುವ ಯುಕೆ 998 ಸೇರಿ ಹಲವು ವಿಮಾನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.