ವೈದ್ಯಕೀಯ ವಿದ್ಯಾರ್ಥಿಯೋರ್ವ ಡೆಂಘಿ ಜ್ವರಕ್ಕೆ ಬಲಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಕುಶಾಲ್ (22) ಮೃತ ವಿದ್ಯಾರ್ಥಿಯಾಗಿದ್ದು, ಈತ ಹೊಳೆನರಸೀಪುರ ಗೋಹಳ್ಳಿ ನಿವಾಸಿಯಾಗಿದ್ದಾನೆ.
ಕುಶಾಲ್ ತಂದೆ ಶಿಕ್ಷಕ ವೃತ್ತಿಯಲ್ಲಿದ್ದರೆ ತಾಯಿ ರೇಖಾ ಟೈಲರ್ ಕೆಲಸ ಮಾಡುತ್ತಿದ್ದರು. ಕುಶಾಲ್ ಬಡತನವಿದ್ದರೂ ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿದ್ದ.
ಕಳೆದ ವಾರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಗನ ಸಾವಿನಿಂದ ನೊಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.