ಚಿಕ್ಕಮಗಳೂರು ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್.ಎಫ್.ಓ. ಅಧಿಕಾರಿ ಓರ್ವ ರಾಣಿಝರಿ, ಬಂಡಾಜೆ ಫಾಲ್ಸ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಂಚಿಸಿ, ಸರ್ಕಾರಕ್ಕೆ ಬರುವ ಲಕ್ಷಾಂತರ ರೂಪಾಯಿಯನ್ನು ಆತನ ಪ್ರಿಯತಮೆಯ ಖಾತೆಗೆ ವರ್ಗಾಯಿಸಿರುವ ಬಗ್ಗೆ ವರದಿಯಾಗಿದೆ.
ಡಿ.ಆರ್.ಎಫ್.ಓ. ಚಂದನ್ ಗೌಡ ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನಲ್ಲಿ ನಡೆದಿದೆ.9000ರೂ. ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರು ಬಂಡಾಜೆ ಫಾಲ್ಸ್ ನೋಡಲು ತೆರಳಿದ್ದರು. ಈ ಮಧ್ಯೆ ಚೆಕ್ ಮಾಡಲು ಹೋಗಿದ್ದ ಪೊಲೀಸರಿಗೆ ಪ್ರವಾಸಿಗರು ಸಿಕ್ಕಿ ಬಿದ್ದಿದ್ದಾರೆ. ವಿಚಾರಣೆ ಮಾಡಿದಾಗ ಜೂನ್ ತಿಂಗಳ ಆನ್‌ಲೈನ್ ಟಿಕೆಟ್ ಬುಕ್ಕಿಂಗ್, ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ತಾಳೆ ಆಗುತ್ತಿರಲಿಲ್ಲ. ಪೊಲೀಸರು ಪ್ರವಾಸಿಗರನ್ನು ವಿಚಾರಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ.ಚಂದನ್ ಗೌಡ ಅವರನ್ನು ಅಮಾನತು ಮಾಡುವಂತೆ ಕೊಪ್ಪ ಡಿ.ಎಫ್.ಓ. ಉಪೇಂದ್ರ ಪ್ರತಾಪ್ ಸಿಂಗ್ ಆದೇಶಿಸಿದ್ದಾರೆ.
ಆನ್‌ಲೈನ್ ಟಿಕೆಟ್ ಫೋರ್ಜರಿ ಮಾಡುವ ಮೂಲಕ ಈ ಹಣವನ್ನು ವಂಚನೆ ಮಾಡಲಾಗಿದೆ ಎನ್ನುವುದು ತನಿಖೆಯಿಂದ ಬಯಲಾಗಿದೆ.