Breaking:

ವಿವಾದಿತ ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ; ಜಿಲ್ಲಾಡಳಿತ ಸ್ಪಷ್ಟನೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ದ್ವಜಾರೋಹಣಕ್ಕೆ ಸಿದ್ದತೆ ನಡೆಯುತ್ತಿದೆ, ಆದರೆ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ಇಲ್ಲ  ಎಂದು ಜಿಲ್ಲಾಡಳಿತ ತಿಳಿಸಿದೆ.

ನಾಳೆ ಬೆಳಗ್ಗೆ 8 ಘಂಟೆಗೆ ನಡೆಯುವ ಧ್ವಜಾರೋಹಣಕ್ಕೆ ಜಿಲ್ಲಾಡಳಿತ ವತಿಯಿಂದ ಬೆಂ.ಉತ್ತರ ವಲಯ ಉಪವಿಭಾಗಾಧಿಕಾರಿ ಪ್ರಮೋದ್ ಪಾಟೀಲ್ ಧ್ವಜಾರೋಹಣ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಕೆ.ಎ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಕೇವಲ ಸರ್ಕಾರ ನಿಗಧಿ ಪಡಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಧ್ವಜಾರೋಹಣಕ್ಕೆ ಸಂಘಟನೆಯವರು ಮುಂದಾದ್ರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್